ತಮಿಳುನಾಡು: ಶನಿವಾರ (ಜ.4) ಮುಂಜಾನೆ ವಿರುದುನಗರ ಜಿಲ್ಲೆಯ ಸತ್ತೂರ್ ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ಈ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಾಹಿತಿಯ ಪ್ರಕಾರ, ಕಾರ್ಖಾನೆಯಿಂದ ಇದುವರೆಗೆ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮೃತರನ್ನು ನಾಗರಾಜ್, ಕಣ್ಣನ್, ಕಾಮರಾಜ್, ಶಿವಕುಮಾರ್ ಮತ್ತು ಮೀನಾಕ್ಷಿ ಸುಂದರಂ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯನ್ನು ವಿರುದನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ :ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕು : ಡಿವೋರ್ಸ್ಗೆ ಮುಂದಾದ ದಂಪತಿಗಳು ?
ರಾಸಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಪೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಘಟನೆಗೂ ಮುನ್ನ ವಿದಿರ ನಗರದಲ್ಲಿ ಸಂಭವಿಸಿದ್ದ ಪಟಾಕಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.