Wednesday, January 8, 2025

HMP ವೈರಸ್​ ಅಪಾಯಕಾರಿ​ ಅಲ್ಲ, ನಾವು ಮುಂಜಾಗ್ರತ ಕ್ರಮ ಕೈಗೊಳ್ಳುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು : ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ. ಸಿದ್ದರಾಮಯ್ಯ ‘ HMP  ವೈರಸ್​ ರಾಜ್ಯದಲ್ಲಿ ಕಾಣಿಸಿಕೊಂಡಿರುವುದು ತಿಳಿದು ಬಂದಿದೆ. ಇದು ಹೆಚ್ಚು ಅಪಾಯಾಕಾರಿಯಾದ ವೈರಸ್​ ಅಲ್ಲ, ಇದರ ಬಗ್ಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ HMP ವೈರಸ್​ ಕಂಡು ಬಂದಿದ್ದು. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು ‘HMP ವೈರಸ್​ನ್ನು, ಚೀನಾ ವೈರಸ್​ ಅಂತಾರೆ, ಇದು ನಮ್ಮ ರಾಜ್ಯಕ್ಕೂ ಬಂದಿದೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಇದರ ಕುರಿತು ಈಗಾಗಲೇ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದಾರೆ. ಈ ವೈರಸ್​ ಅಪಾಯಾಕಾರಿ ಅಲ್ಲ. ಇದನ್ನು ತಡೆಗಟ್ಟಲು ಸರ್ಕಾರ ಎಲ್ಲಾ ತಯಾರಿಯನ್ನು ಒದಗಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ :ಬೈಕ್​ ಸಮೇತ ಹೇಮಾವತಿ ನಾಲೆಗೆ ಬಿದ್ದ ಸವಾರ : ಮೃತದೇಹ ಹೊರ ತೆಗೆಯಲು ಹರಸಾಹಸ !

ಮುಂದುವರಿದು ಮಾತನಾಡಿದ ಸಿಎಂ ‘ಆರೋಗ್ಯ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಂಡಿದೆ, ಸಚಿವ ದಿನೇಶ್​ ಗುಂಡೂರಾವ್​ ಇದರ ಕುರಿತು ಆರೋಗ್ಯಧಿಕಾರಿಗ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಇದರ ಬಗ್ಗೆ ಏನು ನಿರ್ಣಯ ಕೈಗೊಳ್ಳುತ್ತದೋ ಆ ರೀತಿ ಕ್ರಮ ಕೈಗೊಳ್ಳುತ್ತೇವೆ. ವಿದೇಶದಿಂದ ಬರುವವರ ಸ್ಕ್ರೀನಿಂಗ್ ಮಾಡುವ ವಿಚಾರವಾಗಿ ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES