Wednesday, January 8, 2025

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ನಹ*ತ್ಯೆಗೆ ಯತ್ನ !

ರಾಯಚೂರು: ಪೊಲೀಸರು ನೀಡುತ್ತಿದ್ದ ಕಿರುಕುಳವನ್ನು ಸಹಿಸದ ವ್ಯಕ್ತಿಯೋರ್ವ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸುನೀಲ್​ ಎಂದು ಗುರುತಿಸಲಾಗಿದೆ.

ರಾಯಚೂರು ನಗರದ ನೇತಾಜಿ ಠಾಣೆಯ ಪೊಲೀಸರು ಸುನಿಲ್​ ಎಂಬಾತನಿಗೆ ಕಿರುಕುಳ ನೀಡುತ್ತಿದ್ದರು. ಗಾಂಜಾ ಮಾರಾಟ ಮಾಡುತ್ತಿದ್ದೀಯ ಎಂದು ಆರೋಪಿಸಿ ಒಂದು ಲಕ್ಷ ಹಣವನ್ನು ನೀಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವನ್ನು ಸಹಿಸದೆ ಸುನೀಲ್​ ಡಿಸೆಂಬರ್ 28ರಂದು ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ : ಪರಸ್ತ್ರೀ ಜೊತೆ ಪತಿ ಪರಾರಿ : ಗಂಡನ ಪೋಟೋಗೆ ಮಸಿ ಬಳಿದ ಪತ್ನಿ !

ಸುನೀಲ್​ ಸ್ಥಿತಿ ಗಂಭೀರವಾಗಿದ್ದು, ಆತನನ್ನು ರಾಯಚೂರಿನ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES