Wednesday, January 8, 2025

ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್​ ಉದ್ಘಾಟಿಸಿದ ಉಪ ರಾಷ್ಟ್ರಪತಿ ಜಗದೀಪ್​ ಧನಕರ್​ !

ಮಂಗಳೂರು: ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್​ ಉದ್ಘಾಟಿಸಿದ ನಂತರ ಭಾಷಣ ಮಾಡಿದ ಉಪರಾಷ್ಟ್ರಪತಿ ಜಗದೀಪ್​ ಧನಕರ್​ ‘ ಲಕ್ಷಾಂತರ ಜನರು ಮಂಜುನಾಥ ದೇವರ ದರ್ಶನಕ್ಕೆ ಬರುತ್ತಾರೆ. ಅದಕ್ಕಾಗಿ ಈ ಕ್ಯೂ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಕ್ಯು ಕಾಂಪ್ಲೆಕ್ಸ್ ಉದ್ಘಾಟನೆ ನೆರವೇರಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ‘ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದರು. ‘ ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯು ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯು ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡಿದೆ.

ಇದನ್ನೂ ಓದಿ : ದೆಹಲಿ ಚುನಾವಣೆಗೆ ‘ಫಿರ್ ಲಯೇಂಗೆ ಕೇಜ್ರಿವಾಲ್’ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ AAP !

ಈ ಕ್ಯೂ ಕಾಂಪ್ಲೆಕ್ಸ್​  ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು ಸಮಾನತೆಯನ್ನು ತೋರಿಸುತ್ತದೆ.
ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಜಗದೀಪ್​ ಧನಕರ್​ ‘ ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು, ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದುದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ ? ದೇಶ ಸೇವೆಗೆ ನಮ್ಮ ಸೇವೆಯನ್ನು ವಿನಿಯೋಗ ಮಾಡಬೇಕು ಎಂದು ಹೇಳಿದರು.

ನಮ್ಮದು ಪ್ರಪಂಚದ ಅತ್ಯುನ್ನತ ನಾಗರಿಕತೆಯಾಗಿದೆ, ದೇಶದಲ್ಲಿ ಸಮಗ್ರತೆ, ವೈವಿದ್ಯತೆ, ಸೌಹಾರ್ಧತೆಯನ್ನು ಉಳಿಸಿಕೊಳ್ಳಬೇಕಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ, ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ, ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ದೇಶಪ್ರೇಮದ ಕುರಿತು ಜಗದೀಪ್​ ಧನಕರ್​ ಮಾತನಾಡಿದರು.

RELATED ARTICLES

Related Articles

TRENDING ARTICLES