ಮಲಪ್ಪುರಂ: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ಅಟ್ಟಹಾಸ ಮೆರೆದ ಘಟನೆ ಬುಧವಾರ ಮಧ್ಯರಾತ್ರಿ 1 ಗಂಟೆ ವೇಳೆಗೆ ಪುತಿಯಂಗಡಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ಬಿಪಿ ಅಂಗಡಿಯಲ್ಲಿರುವ ಯಾಹೂ ತಂಗಳ್ ಅವರ ದೇಗುಲದಲ್ಲಿ ನಾಲ್ಕು ದಿನಗಳ ವಾರ್ಷಿಕ ಉತ್ಸವಗಳು ಅಥವಾ ನೇರ್ಚಾ ನಡೆಯುತ್ತಿತ್ತು. ಈ ಉತ್ಸವ ಮುಗಿಯುವ ಕೆಲ ಗಂಟೆಗಳ ಮೊದಲು ಪಕ್ಕೋತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆಯು ಅಲ್ಲಿದ್ದ ಜನರ ಮಧ್ಯೆ ನುಗ್ಗಿದೆ ಮತ್ತು ಅಲ್ಲಿ ನೆರೆದಿದ್ದ ಭಕ್ತರ ಮೇಲೆ ಆಕ್ರಮಣ ಮಾಡಿದೆ. ಘಟನೆಯ ದೃಷ್ಯಾವಳಿಗಳು ಕ್ಯಾಮರದಲ್ಲಿ ಸೆರೆಯಾಗಿದ್ದು. ಮನಷ್ಯರನ್ನು ಎತ್ತಿ ಮೇಲಕ್ಕೆಸೆಯುವ ವಿಡಿಯೋಗಳು ವೈರಲ್ ಆಗಿವೆ. ಈ ಘಟನೆಯಲ್ಲಿ 17ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗವಾಗಿದ್ದು. ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ನಕ್ಸಲಿಸಂ ಬಿಟ್ಟು ಪೊಲೀಸ್ ಇಲಾಖೆ ಸೇರಿದ್ದ ಐದು ನಕ್ಸಲರು ಭೀಕರ ಬಾಂಬ್ ಸ್ಪೋ*ಟದಲ್ಲಿ ಸಾ*ವು !
ಕೊನೆಗೆ ಮಾವುತರು ಆನೆಯನ್ನು ಹತೋಟಿಗೆ ತಂದಿದ್ದು. ಆನೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಕೊಟ್ಟಕ್ಕಲ್‌ನ ಆಸ್ಟರ್ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ದೊರೆತಿದೆ.