Thursday, January 9, 2025

ತಿರುಪತಿಯ ಭೀಕರ ಕಾಲ್ತುಳಿತದಲ್ಲಿ 7 ಮಂದಿ ಸಾ*ವು : ಈ ದುರಂತಕ್ಕೆ ಕಾರಣವೇನು ?

ತಿರುಪತಿ : ವೈಕುಂಠ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ಭಾರೀ ದುರಂತ ಸಂಭವಿಸಿದೆ. ದರ್ಶನದ ಟಿಕೆಟ್​​ ಪಡೆಯಲು ಜನರು ಸಾಲುಗಟ್ಟಿ ನಿಂತಿದ್ದಾಗ ಉಂಟಾದ ಕಾಲ್ತುಳಿತದಲ್ಲಿ 7 ಮಂದಿ ಸಾವನ್ನಪ್ಪಿದ್ದು. 40ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾವನ್ನಪ್ಪಿರುವ ಪೈಕಿ ಕರ್ನಾಟಕದ ಬಳ್ಳಾರಿ ಮೂಲದ ಓರ್ವ ಮಹಿಳೆಯರು ಇದ್ದಾರೆ ಎಂದು ತಿಳಿದು ಬಂದಿದೆ.

ತಿರುಪತಿ ದೇಗುಲದ ಶ್ರೀನಿವಾಸಂ ಬಳಿ ಘಟನೆ ನಡೆದಿದ್ದು, 7 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಬಳ್ಳಾರಿ ಮೂಲದ ಮಹಿಳೆ ನಿರ್ಮಲ (50) ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳುಗಳಿಗೆ ಆಂದ್ರಪ್ರದೇಶದ ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೃತರನ್ನು ವೈಜಾಗ್‌ನ ರಜನಿ (47), ವೈಜಾಗ್‌ನ ಲಾವಣ್ಯ (40), ವೈಜಾಗ್‌ನ ಶಾಂತಿ (30), ಸೇಲಂನ ಮಲ್ಲೀಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ :ಆಸ್ಕರ್ ರೇಸ್​ನಲ್ಲಿವೆ ಭಾರತದ 5 ಸಿನಿಮಾಗಳು : ‘ಕಂಗುವಾ’ ಸಿನಿಮಾಗೆ ಒಲಿಯಲಿದೆಯ ಆಸ್ಕರ್​ ಗೌರವ !

ಕಾಲ್ತುಳಿತವಾಗಲು ಕಾರಣವೇನು ?

ಇದೇ ಜನವರಿ 10ನೇ ತಾರೀಖಿನಿಂದ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರದ ಸರ್ವದರ್ಶನಕ್ಕೆ ಗುರುವಾರ ಬೆಳಗಿನ ಜಾವ 5 ಗಂಟೆಯಿಂದ ಟಿಕೆಟ್​ ನೀಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ ಪ್ರಕಟಣೆ ಹೊರಡಿಸಿತ್ತು. ಪ್ರತಿ ದಿನಕ್ಕೆ 40 ಸಾವಿರದಂತೆ 3 ದಿನಗಳಲ್ಲಿ 1 ಲಕ್ಷದ 20 ಸಾವಿರ ದರ್ಶನ ಟಿಕೆಟ್​ ನೀಡಲು ಟಿಟಿಡಿ ನಿರ್ಧರಿಸಿತ್ತು. 9 ಕಡೆಗಳಲ್ಲಿ 90 ಕೌಂಟರ್‌ಗಳ ಮೂಲಕ ಸರ್ವದರ್ಶನ ಟಿಕೆಟ್​​ ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿತ್ತು.

ಸಾಮಾನ್ಯ ದಿನಗಳಲ್ಲೆ ತಿರುಪತಿಯಲ್ಲಿ ಸಾವಿರಾರು ಭಕ್ತರು ದರ್ಶನ ಪಡೆಯುತ್ತಾರೆ. ಇನ್ನು ವೈಕುಂಠ ಏಕಾದಶಿ ಹಿನ್ನಲೆ ವೈಕುಂಠ ದ್ವಾರ ದರ್ಶನದ ಟಿಕೆಟ್​ ಪಡೆಯಲು ಭಕ್ತರು ಬುಧವಾರ ರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಬೈರಾಗಿಪಟ್ಟೇಡ ರಾಮ ನಾಯ್ಡು ಶಾಲೆಯ ಬಳಿಯ ಕೌಂಟರ್‌ನಲ್ಲಿ ಸಾಲಿನಲ್ಲಿ ನಿಂತಿದ್ದ ಭಕ್ತರೊಬ್ಬರಿಗೆ ದಿಢೀರ್‌ ಉಸಿರಾಟದ ಸಮಸ್ಯೆಯಾಗಿದೆ.

ಆ ಭಕ್ತರನ್ನು ಆಸ್ಪತ್ರೆಗೆ ಕರೆದೊಯ್ಯಲು ಭದ್ರತಾ ಸಿಬ್ಬಂದಿ ಒಮ್ಮೆ ಕೌಂಟರ್‌ ಗೇಟ್‌ ತೆರೆದಿದ್ದಾರೆ. ಈ ವೇಳೆ ಟಿಕೆಟ್‌ ನೀಡಲೆಂದೇ ಈ ಗೇಟ್‌ ತೆರೆಯಲಾಗಿದೆ ಎಂದು ಭಾವಿಸಿದ ಭಕ್ತರು ಏಕಾಏಕಿ ಕೌಂಟರ್‌ ಕಡೆಗೆ ನುಗ್ಗಿದ್ದಾರೆ. ಇದರಿಂದ ನೂಕುನುಗ್ಗಲು ಸಂಭವಿಸಿ ಕೆಲವರು ಕೆಳಗೆ ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಕೆಲವರು ಓಡಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಎಂದು ವರದಿಯಾಗಿದೆ. ಟಿಕೆಟ್‌ ಪಡೆಯಲು ಎಲ್ಲಾ ಭಕ್ತರು ಸರತಿಯಲ್ಲೇ ನಿಂತಿದ್ದರು. ಎಲ್ಲಾ ಭಕ್ತರು ಒಂದೇ ಬಾರಿಗೆ ಕೌಂಟರ್‌ ಬಳಿ ನುಗ್ಗಿದ್ದರಿಂದ ಹಲವು ಮಂದಿ ಜನ ಸಂದಣಿಯಲ್ಲಿ ಸಿಲುಕಿದ್ದರಿಂದ ದುರಂತ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡವರನ್ನು ವಿಜಯವಾಡದ ರಿಯಾ ಆಸ್ಪತ್ರೆಗೆ ದಾಖಲಿಸಿದ್ದು. ಘಟನಾ ಸ್ಥಳದಲ್ಲಿದ್ದ ಪೊಲೀಸರೆ ಕೆಲವು ಜನರಿಗೆ ಪ್ರಥಮ ಚಿಕಿತ್ಸೆ ನೀಡಿರುವ ವಿಡಿಯೋಗಳು ವೈರಲ್​ ಆಗಿವ. ಘಟನೆ ಬಗ್ಗೆ ಆಂಧ್ರ ಪ್ರದೇಶ್​ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಖಂಡನೆ ವ್ಯಕ್ತಪಡಿಸಿದ್ದು. ಮೃತರ ಕುಟುಂಬದ ಜೊತೆ ನಿಲ್ಲುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಕೂಡ ಟ್ವಿಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

 

 

RELATED ARTICLES

Related Articles

TRENDING ARTICLES