ರಾಣಿಪೇಟೆ : ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಬವಿಸಿದ್ದು. ಕ್ಯಾಂಟರ್ನಲ್ಲಿದ್ದ ಕರ್ನಾಟಕ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ರಾಣಿಪೇಟ್ನಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದ್ದು. ಓಂ ಶಕ್ತಿಗೆ ಮಹಿಳೆಯರನ್ನು ಕರೆದೊಯ್ದಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಶ್ರೀನಿವಾಸಪುರ ತಾಲ್ಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈ ಗೆ ತರಕಾರಿ ತುಂಬಿಕೊಂಡು ಹೋಗಿದ್ದ ಕ್ಯಾಂಟರ್ ನಡುವೆ ಈ ಅಪಘಾತ ಸಂಭಿವಿಸಿದೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :KSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಕ್ಕಳ ಸಾ*ವು !
ಮೃತರನ್ನು ಮಂಜುನಾಥ, ಕೃಷ್ಣಪ್ಪ, ಶಂಕರ ಹಾಗೂ ಸೋಮಶೇಖರ ಎಂದು ಗುರುತಿಸಿದ್ದು. ಶ್ರೀನಿವಾಸ ಪುರದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗಿದ್ದರು ಎಂದು ತಿಳಿದಬಂದಿದೆ. ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದ್ದು. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ ಹಾಗೂ ರತ್ನಗಿರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಮಾಹಿತಿ ದೊರೆತಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪೊಲೀಸರು ಇದರ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.