Friday, January 10, 2025

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ !

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರ ಈ ಕ್ರಮವನ್ನು ಕೈಗೊಂಡಿದ್ದು. ನಟ ಕಿಶೋರ್​ರನ್ನು ರಾಯಭಾರಿಯಾಗಿ ನೇಮಿಸಿದೆ.

2025ರ ಮಾ.1 ರಿಂದ 8ರ ವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ  ನಡೆಯಲಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಇರಲಿದೆ.

ಇದನ್ನೂ ಓದಿ: ರಸ್ತೆ ಬದಿಯಲ್ಲಿ ಮಲಗಿದ್ದ ನಾಯಿಯ ಮೇಲೆ ಕಾರು ಚಲಾಯಿಸಿ ವಿಕೃತಿ ಮೆರೆದ ಕಿರಾತಕ !

ಟ್ವಿಟ್​ ಮಾಡಿ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ !

ಚಿತ್ರೋತ್ಸವದ ರಾಯಭಾರಿಯಾಗಿ ಕಿಶೋರ್​ರನ್ನು ಆಯ್ಕೆ ಮಾಡಿರುವ ಘಟನೆ ಬಗ್ಗೆ ಅಭಿನಂದನೆ ಸಲ್ಲಿಸಿರುವ ಬಗ್ಗೆ ಟ್ವಿಟ್​ ಮಾಡಿರುವ ಮುಖ್ಯಮಂತ್ರಿ ” 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ಅವರಿಗೆ ಅಭಿನಂದನೆಗಳು.

“ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ.

RELATED ARTICLES

Related Articles

TRENDING ARTICLES