ಅಮರಾವತಿ : ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 7 ಜನ ಸಾವನ್ನಪ್ಪಿದ್ದು. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಬಗ್ಗೆ ತನಿಖೆ ಆರಂಭಿಸಿರುವ ಚಂದ್ರಬಾಬು ನಾಯ್ಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ.
ತಿರುಪತಿ ದೇಗುಲದ ಶ್ರೀನಿವಾಸಂ ಬಳಿ ಘಟನೆ ನಡೆದಿದ್ದು, 7 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಬಳ್ಳಾರಿ ಮೂಲದ ಮಹಿಳೆ ನಿರ್ಮಲ (50) ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳುಗಳಿಗೆ ಆಂದ್ರಪ್ರದೇಶದ ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೃತರನ್ನು ವೈಜಾಗ್‌ನ ರಜನಿ (47), ವೈಜಾಗ್‌ನ ಲಾವಣ್ಯ (40), ವೈಜಾಗ್‌ನ ಶಾಂತಿ (30), ಸೇಲಂನ ಮಲ್ಲೀಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:KSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾ*ವು!
ಘಟನೆ ಬಗ್ಗೆ ಆಂಧ್ರ ಪ್ರದೇಶ್ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆಂಧ್ರ ಮುಜರಾಯಿ ಇಲಾಖೆ ಸಚಿವ ರಾಮನಾರಯಣ ರೆಡ್ಡಿ ಪರಿಹಾರವನ್ನು ಘೋಷಿಸಿದ್ದು. ಮೃತರ ಕುಟುಂಬಕ್ಕೆ ತಲಾ 25ಲಕ್ಷ ಹಣವನ್ನು ಘೋಷಿಸಿದೆ. ಈ ಪರಿಹಾರಕ್ಕೆ ಜಗನ್ನ ವೈಎಸ್ಆರ್ಪಿ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು. ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಬೇಕು ಎಂದು ಘೋಷಿಸಿದೆ.