Sunday, January 12, 2025

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಾಡೆಮ್ಮೆ, ಕಾಡಾನೆ ಸಾ*ವು !

ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಒಂದೇ ದಿನ ಆನೆ ಹಾಗೂ ಕಾಡಮ್ಮೆ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ.

ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವ ಆನೆ ಸುಮಾರು 40 ವರ್ಷ ವಯಸ್ಸಾಗಿದ್ದು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಹೆಣ್ಣಾನೆ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ :ಕೈ ಕೊಟ್ಟ ಪ್ರೇಯಸಿ , ವಿಷ ಸೇವಿಸಿ ಸಾ*ವಿಗೆ ಶರಣಾದ ಯುವಕ !

ಇನ್ನು ಮತ್ತೊಂದು ಪ್ರಕರಣದಲ್ಲಿ ಹನೂರು ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕಾಡೆಮ್ಮೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.

ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿ ಅರಣ್ಯದಲ್ಲಿ, ಚಿರತೆಯೊಂದು ಕಾಡೆಮ್ಮೆಯ ಮೇಲೆ ದಾಳಿ ನಡೆಸಿದ್ದು, ಅದರಿಂದ ತಪ್ಪಿಸಿಕೊಳ್ಳಲು ಹೋಗಿ, ಕಾಡೆಮ್ಮೆ ಕಂದಕಕ್ಕೆ ಬಿದ್ದು ಅಸುನೀಗಿದೆ. ಈ ಸಂಬಂಧ, ವಲಯ ಅರಣ್ಯ ಅಧಿಕಾರಿ ಪ್ರವೀಣ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಂದಕಕ್ಕಲ್ಲಿದ್ದ ಕಾಡೆಮ್ಮೆ ಮೃತದೇಹವನ್ನು ಮೇಲಕ್ಕೆ ಎತ್ತಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES