ಬೆಂಗಳೂರು : ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್ನಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು. ಹಲವು ಜಿಲ್ಲೆಗಳಿಗೆ ಅಲರ್ಟ್ ಜಾರಿ ಮಾಡಲಾಗಿದೆ.
ಹೌದು… ರಾಜ್ಯ ಹವಮಾನ ಇಲಾಖೆಯ ಮುಸ್ಸೂಚನೆಯ ಮೇರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದ್ದು. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಹಿಂದೂ ಎಂಬ ಪದವು ಅಪಮಾನಕರವಾದ ಶಬ್ಧವಾಗಿದೆ : ಪ್ರೋ.ಕೆ.ಎಸ್ ಭಗವಾನ್
ಜೊತೆಗೆ ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ ಹಾ್ಗೂ ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಜು ಕವಿದ ವಾತವರಣವಿರಲಿದೆ ಎಂದು ಮಾಹಿತಿ ದೊರೆತಿದೆ.