Monday, January 13, 2025

ಭೀಕರ ರಸ್ತೆ ಅಪಘಾತ : 6 ಮಂದಿ ಸಾ*ವು, 13ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ !

ನಾಸಿಕ್​ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ಟೆಂಪೋ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಯ್ಯಪ್ಪ ದೇವಸ್ಥಾನದ ಬಳಿಯ ದ್ವಾರಕಾ ವೃತ್ತದಲ್ಲಿ ರಾತ್ರಿ 7:30 ರ ಸುಮಾರಿಗೆ ಈ ಅಹಿತಕರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಫಾಡ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು. ಧಾರ್ಮಿಕ ಕಾರ್ಯಕ್ರಮವನ್ನು ಮುಗಿಸಿ ಟೆಂಪೋ ಟ್ರಾವಲರ್​ನಲ್ಲಿ ಹಿಂತಿರುಗುತ್ತಿದ್ದ 16 ಜನರ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಕರುಳಿನ ಕುಡಿಗಳನ್ನೆ ಕಾಲುವೆಗೆ ಎಸೆದ ತಾಯಿ : 4 ಮಕ್ಕಳು ಸಾ*ವು !

ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಟ್ರಕ್​ಗೆ ಹಿಂದಿನಿಂದ  ಡಿಕ್ಕಿ ಹೊಡೆದಿದೆ. ಈ ವೇಳೆ ಟೆಂಪೋ ಟ್ರಾವಲರ್​ನಲ್ಲಿದ್ದ 6 ಜನರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನು ಉಳಿದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು. ಗಾಯಗೊಂಡ ಕೆಲವರಲ್ಲಿ ಚಿಂತಾಜನರಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.

ಅಪಘಾತದಲ್ಲಿ ಸಾವನ್ನಪ್ಪಿರಿವ ಕುಟುಂಬಗಳಿಗೆ ಮಹರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್​ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೊಷಿಸಿದ್ದಾರೆ.

 

RELATED ARTICLES

Related Articles

TRENDING ARTICLES