ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು. ಚಾಕಿ ಇರಿದಿದ್ದ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಆದಿಪುರಷ ಸಿನಿಮಾ ಖ್ಯಾತಿಯ ಸೈಫ್ ಅಲಿ ಖಾನ್ರ ಮೇಲೆ ನಿನ್ನೆ ತಡರಾತ್ರಿ 2 ಗಂಟೆ ವೇಳೆಗೆ ಚಾಕು ಇರಿತವಾಗಿದ್ದು, ದರೋಡೆಗೆ ಎಂದು ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ. ಚಾಕು ಇರಿದ ನಂತರ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದು. ಸದ್ಯ ನಟನಿಗೆ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಪ್ ಅಲಿಖಾನ್ ಪತ್ನಿ ಕರೀನಾ ಕಪೂರ್ ಮತ್ತು ಅವರ ಇಬ್ಬರು ಮಕ್ಕಳು ಸೇಫ್ ಆಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಇದನ್ನು ಓದಿ: ಲಾಲ್ಬಾಗ್ ಫಲಪುಷ್ಪ ಪ್ರದರ್ಶನ 2025 : ಶಾಲಾ ಸಮವಸ್ತ್ರ ಧರಿಸಿ ಬರುವ ಮಕ್ಕಳಿಗೆ ಉಚಿತ ಪ್ರವೇಶ !
ಮೂವರು ಶಂಕಿತರ ಬಂಧನ !
ಬಾಲಿವುಡ್ ನಟ ಸೈಪ್ ಅಲಿಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದು. ಆರಫಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು. ಘಟನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.