ಬೆಳಗಾವಿ :ಅಂಕಲಗಿ ಗ್ರಾಮದಲ್ಲಿ ಮಾತನಾಡಿದ ರಮೇಶ್ ಜಾರಕಿ ಹೋಳಿ, ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಮೇಲೆ ವಾಗ್ದಾಳಿ ನಡೆಸಿದ್ದು. ವಿಜಯೇಂದ್ರ ನೀನು ಬಚ್ಚಾ, ನಿನಗೆ ರಾಜ್ಯದ್ಯಕ್ಷನಾಗಲು ಯೋಗ್ಯತೆ ಇಲ್ಲ ಎಂದು ಹೇಳಿದ್ದಾರೆ.
ಅಂಕಲಗಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೋಳಿ ‘ ನಮ್ಮಲ್ಲಿ ಜಗಳ ಇರೋದು ಮಾತ್ರ ಅಧ್ಯಕ್ಷರ ಬದಲಾವಣೆಗೆ ಅಷ್ಟೆ, ಅಧ್ಯಕ್ಷ ಚೇಂಜ್ ಆದರೆ ಓಕೆ, ಇಲ್ಲವಾದ್ರೂ ಪಕ್ಷ ಸಂಘಟನೆ ಮಾಡ್ತೇವಿ.ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಮಾತನಾಡಿದ ರಮೇಶ್ ಜಾರಕಿಹೋಳಿ. ‘ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯವಿಲ್ಲ.
ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ ಅದರಲ್ಲಿ ಎರಡು ಮಾತಿಲ್ಲ. ಇಂದಿಗೂ ನಾನು ಯಡಿಯೂರಪ್ಪ ಮೇಲೆ ಅಗೌರವದಿಂದ ಮಾತಾಡಿಲ್ಲ. ಇಂದಿಗೂ ಅವರ ಮೇಲೆ ಗೌರವ ಇದೆ.ಆದರೆ ನೀನು ಸುಳ್ಳು ಹೇಳುವುದು ಬಿಡು ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಪಿಗೆ ಭಾರತ ತಂಡ ಪ್ರಕಟ : ತಂಡಕ್ಕೆ ಮರಳಿದ ಶಮಿ !
ಮುಂದುವರಿದು ಮಾತನಾಡಿದ ರಮೇಶ್ ಜಾರಕಿಹೋಳಿ ‘ನಾನು ಶಿಕಾರಿಪುರಕ್ಕೆ ಬರ್ತೇನಿ, ವಿಜಯೇಂದ್ರ ಮನೆ ಮುಂದಿನಿಂದ ಪ್ರವಾಸ ಶುರು ಮಾಡ್ತೇನಿ, ನಿನ್ನ ಸವಾಲು ಸ್ವೀಕಾರ ಮಾಡಿದ್ದೇನೆ ನೀನು ದಿನಾಂಕ ನಿಗದಿ ಮಾಡು
ಬೆಂಬಲಿಗರು ಬರಲ್ಲಾ, ಗನ್ ಮ್ಯಾನ್ ಬರಲ್ಲ ನಾನು ಒಬ್ಬನೇ ಬರ್ತೇನಿ, ಅಲ್ಲಿಂದ ಪ್ರವಾಸ ಆರಂಭ ಮಾಡುತ್ತೇನೆ, ನನ್ನನ್ನು ತಡಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.