Monday, January 20, 2025

ಬೆಳ್ಳಂಬೆಳಿಗ್ಗೆ ಭೀಕರ ಸರಣಿ ಅಪಘಾತ : ಲಾರಿ ಕೆಳಗೆ ಸಿಲುಕಿ ಅಪ್ಪಚ್ಚಿಯಾದ ಕಾರು !

ನೆಲಮಂಗಲ: ಬೆಳ್ಳಂಬೆಳಿಗ್ಗೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು. ಸಿಫ್ಟ್​ ಕಾರು, ಲಾರಿ ಮತ್ತು ಟೂರಿಸ್ಟ್​ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿನ ಕೆಳಗೆ ಸಿಲುಕಿದ ಕಾರು ನಜ್ಜುಗುಜ್ಜಾಗಿದ್ದು. ಪವಾಡ ಸದೃಷ್ಯ ರೀತಿಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ನೆಲಮಂಗಲದ ಗುಡ್ಡೇನಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದ್ದು. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಸಿಫ್ಟ್​​ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು. ಕಾರಿನ ಹಿಂದೆ ಬರುತ್ತಿದ್ದ ಟೂರಿಸ್ಟ್​ ಬಸ್​ ಕಾರಿನ ಹಿಂಬಾಗಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಹಿಂಬದಿಯಲ್ಲಿ ಸಿಲುಕಿದ ಕಾರು ನಜ್ಜು ಗುಜ್ಜಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಙನಿಕ ಕಾಮಗಾರಿಯೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ : 25ಕ್ಕೂ ಹೆಚ್ಚು ಜನರಿಗೆ ಗಾಯ !

ಈ ಅಪಘಾತದಲ್ಲಿ ಕಾರ್​ ಚಾಲಕ ಪವಾಡ ರೀತಿಯಲ್ಲಿ ಪಾರಾಗಿದ್ದು. ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಂದು ತಿಂಗಳ ಹಿಂದೆ ಇದೇ ರಸ್ತೆಯಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಒಂದೆ ಕುಟುಂಬದ 6 ಮಂದಿ ಸಾವನ್ನಪ್ಪಿದ್ದರು.

RELATED ARTICLES

Related Articles

TRENDING ARTICLES