ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ಗೆ ಜೀವಾವದಿ ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.
ಸಿಲ್ದಾ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವದಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದು. ಜೊತೆಗೆ 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಸಂತ್ರಸ್ಥೆ ಕುಟುಂಬಕ್ಕೆ 17 ಲಕ್ಷ ಪರಿಹಾರ ನೀಡುವಂತೆ ಆದೇಶ ನೀಡಿದ್ದು. ಪಶ್ಚಿಮ ಬಂಗಾಳ ಸರ್ಕಾರ ಈ ಪರಿಹಾರವನ್ನು ನೀಡಲಿದೆ. ಆದರೆ ಸಂತ್ರಸ್ಥೆಯ ಕುಟುಂಬಸ್ಥರು ಪರಿಹಾರವನ್ನು ನಿರಾಕರಿಸಿದ್ದಾರೆ.
ಇದನ್ನೂ ಓದಿ : ಕಾಂತಾರ ಚಿತ್ರತಂಡದ ವಿರುದ್ದ ಅರಣ್ಯ ನಾಶದ ಆರೋಪ !
ಅಪರಾಧಿಗೆ ನೀಡಿರುವ ಶಿಕ್ಷೆ ಕಡಿಮೆ ಎಂದು ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದ್ದು. ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಊಹಿಸಲಾಗಿದೆ.