Monday, January 20, 2025

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ : 25ಕ್ಕೂ ಹೆಚ್ಚು ಜನರಿಗೆ ಗಾಯ !

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್​ ಪಲ್ಟಿಯಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯದ ಮದ್ದೂರು ತಾಲೂಕಿನ ನಿಢಘಟ್ಟ ಬಳಿಯ ಹಳೇ ಮೈಸೂರು-ಬೆಂಗಳೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದ್ದು. ಚಾಲಕನ ನಿಯಂತ್ರಣ ತಪ್ಪಿದ ಬಸ್​ ರಸ್ತೆಯಲ್ಲಿದ್ದ ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಸ್ಥಳಕ್ಕೆ ಸಚಿವ ಚೆಲುವರಾಯ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಇದು ನನ್ನ ಕೊನೆಯ ನಿರೂಪಣೆ : ಬಿಗ್​ಬಾಸ್​ ಜರ್ನಿ ನೆನೆದು ಭಾವನಾತ್ಮಕ ಪೋಸ್ಟ್​ ಹಂಚಿಕೊಂಡ ಕಿಚ್ಚ !

ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು. ಗಾಯಾಳುಗಳನ್ನು ಮದ್ದೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು. ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES