Tuesday, January 21, 2025

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಾಲಿವುಡ್​​ ನಟ ಸೈಫ್​ ಅಲಿ ಖಾನ್​ !

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಇಂದು (ಮಂಗಳವಾರ) ಮಧ್ಯಾಹ್ನ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.

ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಲ್ಲಿರುವ ನಿವಾಸದಲ್ಲಿ 54 ವರ್ಷದ ಸೈಫ್ ಅಲಿ ಖಾನ್ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸೈಫ್ ಅವರ ಬೆನ್ನೆಲುಬಿಗೆ ಗಂಭೀರ ಗಾಯವಾಗಿದ್ದು, ಅಲ್ಲಿ ಹೊಕ್ಕಿದ್ದ ಚಾಕು ಹೊರತೆಗೆಯಲು ಮತ್ತು ಬೆನ್ನುಮೂಳೆಯ ಮಜ್ಜೆಯನ್ನು ಸರಿಪಡಿಸಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು.

ಇದನ್ನೂ ಓದಿ: ಪತ್ನಿ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹ*ತ್ಯೆಗೆ ಶರಣು !

ಇದೀಗ ಸೈಫ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು’ ಎಂದು ಲೀಲಾವತಿ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ನಿತಿನ್ ಡಾಂಗೆ ಹೇಳಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಗ್ಲಾ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸೈಫ್ ಅವರ ನಿವಾಸಕ್ಕೆ ಶೆಹಜಾದ್ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES