ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಚಲನಚಿತ್ರ ನಿರ್ಮಾಪಕ ಮತ್ತು ಚಿತ್ರಕಥೆಗಾರ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇಂದು ಜನವರಿ 23 ರಂದು ಮುಂಬೈ ನ್ಯಾಯಾಲಯ ರಾಮ್ ಗೋಪಾಲ್ ವರ್ಮಾ ಅವರಿಗೆ ಶಿಕ್ಷೆ ವಿಧಿಸಿದೆ. ರಾಮ್ ಗೋಪಾಲ್ ವರ್ಮಾ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲರಾದ ಕಾರಣ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಪ್ರಕಾರ ಶಿಕ್ಷೆಯನ್ನು ಜಾರಿಗೊಳಿಸಲು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಲಾಗಿದೆ.
ಇದನ್ನೂ ಓದಿ :ಸಿನಿಮಾ ರಂಗಕ್ಕೆ ನಿವೃತ್ತಿ ಘೋಷಿಸಲಿದ್ದಾರಾ ರಶ್ಮಿಕಾ : ಛಾವಾ ಟ್ರೈಲರ್ ಈವೆಂಟ್ನಲ್ಲಿ ಹೇಳಿದ್ದೇನು ?
ಅಂಧೇರಿಯಲ್ಲಿನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ), ವೈ.ಪಿ.ಪೂಜಾರಿ ಅವರು ಮಂಗಳವಾರ ಜನವರಿ 21 ರಂದು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ ಆಕ್ಟ್‌ನ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ರಾಮ್ ಗೋಪಾಲ್ ವರ್ಮಾ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.
ಜೈಲು ಶಿಕ್ಷೆಯ ಜೊತೆಗೆ ದೂರುದಾರರಿಗೆ ₹ 3.72 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಲಾಗಿದೆ . ಈ ಮೊತ್ತವನ್ನು ಮೂರು ತಿಂಗಳೊಳಗೆ ಪಾವತಿಸುವಂತೆ ಚಿತ್ರ ನಿರ್ಮಾಪಕರಿಗೆ ಸೂಚಿಸಲಾಗಿದೆ. ರಾಮ್ ಗೋಪಾಲ್ ವರ್ಮಾ ದೂರುದಾರರಿಗೆ ₹ 3.72 ಲಕ್ಷ ಪಾವತಿಸಲು ವಿಫಲವಾದರೆ , ಅವರು ಹೆಚ್ಚುವರಿ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.