ಬಾಗಲಕೋಟೆ : ವಿಪರೀತ ಸಾಲಕ್ಕೆ ಬೇಸತ್ತು ದಂಪತಿಗಳು ಬ್ರಿಡ್ಜ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು. ಮೃತ ದಂಪತಿಗಳನ್ನು 56 ವರ್ಷದ ಮಲ್ಲಪ್ಪ ಲಾಳಿ ಮತ್ತು 51 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ.
ಬಾಗಲಕೋಟೆಯ ಮುಧೋಳ ನಗರದಲ್ಲಿರುವ ಯಾದವಾಡ ಬ್ರಿಡ್ಜ್ ಬಳಿಯಲ್ಲಿ ಘಟನೆ ನಡೆದಿದೆ. ಕಳೆದ 15 ವರ್ಷಗಳಿಂದ ಮೆಟಗುಡ್ಡ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಗಳು ಅದೇ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರು, ಫೈನಾನ್ಸ್ಗಳಲ್ಲಿ, ಖಾಸಗಿ ವ್ಯಕ್ತಿಗಳ ಬಳಿಯಲ್ಲಿ ಸಾಕಷ್ಟು ಸಾಲ ಮಾಡಿದ್ದರು. ಜೊತೆಗೆ ಇಬ್ಬರು ಹೆಣ್ಣು ಮಕ್ಕಳ ಮದುವೆಗಾಗಿಯೂ ಸಾಲ ಮಾಡಿದ್ದರು.
ಇದನ್ನೂ ಓದಿ : ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ : ಓರ್ವ ಸಾ*ವು !
ಈ ಎಲ್ಲಾ ಸಾಲಗಳಿಂದ ಬೇಸತ್ತಿದ್ದ ದಂಪತಿಗಳು, ಸಾಲ ತೀರಿಸಲಾಗದೆ ಪರದಾಡುತ್ತಿದ್ದರು. ಇದೇ ಕಾರಣಕ್ಕೆ ದಂಪತಿಗಳು ಆತ್ಮಹತ್ಯೆ ಯಾದವಾಡ ಬ್ರಿಡ್ಜ್ಗೆ ನೇಣು ಹಾಕಿಕೊಂಡು ದಂಪತಿಗಳು ಸೂಸೈಡ್ ಮಾಡಿಕೊಂಡಿದ್ದು. ಸ್ಥಳದಲ್ಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.