Friday, January 24, 2025

ಮರಕ್ಕೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೆ ಸಾ*ವು !

ವಿಜಯಪುರ : ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು. ಮೃತರನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳೆಂದು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಎನ್​ಎಚ್ 50 ರಲ್ಲಿ ಘಟನೆ ನಡೆದಿದ್ದು. ಮೃತರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿ ವಾಪಾಸ್​ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ :ಪ್ರಜ್ಞೆ ತಪ್ಪಿದ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಪಶು ಆಸ್ಪತ್ರೆಗೆ ಕರೆದೊಯ್ದ ಶ್ವಾನ : ವಿಡಿಯೋ ವೈರಲ್​

ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಬಿಜಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು. ಮೃತರ ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

RELATED ARTICLES

Related Articles

TRENDING ARTICLES