ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಕಾರ್ಖಾನೆ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸಚಿವ ನಿತೀಶ್ ಗಡ್ಕರಿ ತಿಳಿಸಿದ್ದಾರೆ.
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ಬೆಳಗ್ಗೆ 10 ಗಂಟೆಗೆ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಫ್ಯಾಕ್ಟರಿಯ ಮೇಲ್ಚಾವಣಿ ಕುಸಿದುಬಿದ್ದಿದ್ದು. ಈ ವೇಳೆ ಕಟ್ಟಡದ ಒಳಗೆ 14 ಕಾರ್ಮಿಕರು ಇದ್ದರು. ಇವರಲ್ಲಿ 4 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಹರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ್ ದಾಂಪತ್ಯ ಜೀವನದಲ್ಲಿ ಬಿರುಕು ?
ಜವಾಹರ್ ನಗರ ಭಂಡಾರದ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಪಘಾತದ ನಂತರ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಿದ್ದು. ಪ್ರಸ್ತುತಾ ರಕ್ಷಣಾ ಕಾರ್ಯಚರಣೆಯನ್ನು ನಡೆಸಲಾಗುತ್ತಿದೆ. ಮೇಲ್ಚಾವಣಿ ಕುಸಿದಿದ್ದು. ಜೆಸಿಬಿ ಮೂಲಕ ಮೇಲ್ಚಾವಣಿಯನ್ನು ತೆಗದು ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಕಳುಹಿಸಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.