Friday, January 24, 2025

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಾರ್ವಜನಿಕರಿಂದ ಶಿಕ್ಷಕನಿಗೆ ಧರ್ಮದೇಟು !

ಚಿಕ್ಕೋಡಿ : ಗುರುವಿನ ಸ್ಥಾನದಲ್ಲಿ ನಿಂತು ಶಿಕ್ಷಣ ನೀಡಬೇಕಾದ ಶಿಕ್ಷಕನೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದ್ದು. ಕಾಮುಕ ಶಿಕ್ಷಕನನ್ನು ರಾಹುಲ್​ ಓತಾರೆ ಎಂದು ಗುರುತಿಸಲಾಗಿದೆ.‘

ಚಿಕ್ಕೋಡಿ ಪಟ್ಟಣದ ಆರ್.ಡಿ ಮಹಾವಿದ್ಯಾಲಯದಲ್ಲಿ ಘಟನೆ ನಡೆದಿದ್ದು. ಅಥಿತಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದ ಈತ ಕಾಲೇಜಿನಲಿದ್ದ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಉಪನ್ಯಾಸಕನ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು. ಇಂದು ಕಾಲೇಜಿನ ಬಳಿ ಜಮಾಯಿಸಿದ ವಿದ್ಯಾರ್ಥಿನಿಯ ಪೋಷಕರು ಉಪನ್ಯಾಸಕನಿಗೆ ಥಳಿಸಿದ್ದಾರೆ.

ಇದನ್ನೂ ಓದಿ : ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ದೂರವಾಣಿ ಕರೆ ಮೂಲಕ ಸಾಂತ್ವಾನ ಹೇಳಿದ ಸಿಎಂ !

ಉಪನ್ಯಾಸಕನ ವರ್ತನೆ ತಿಳಿದು ಕೂಡಲೇ ಕಾಲೇಜು ಆಡಳಿತ ಮಂಡಳಿ ಆತನನ್ನು ಕರ್ತವ್ಯದಿಂದ ವಜಾಗೊಳಿಸಿದ್ದು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಾಮುಕ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES