Tuesday, January 28, 2025

5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು !

ಉಡುಪಿ: ಎರಡು ದಿನಗಳ ಹಿಂದೆ ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಚಾಕೊಲೇಟ್ ಆಸೆ ತೋರಿಸಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ. ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿ ಅಪರಿಚಿತನಾಗಿದ್ದರಿಂದ, ಆತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು. ಸಾರ್ವಜನಿಕರ ಸಹಾಯ ಮತ್ತು ಪೊಲೀಸ್‌ ಅಧಿಕಾರಿ ಸಿಬ್ಬಂದಿಗಳ ಸತತ ಪ್ರಯತ್ನದಿಂದ ಬಾಗಲಕೋಟೆ ಜಿಲ್ಲೆಯ ಆರೋಪಿ ಮುತ್ತು(35) ಎಂಬಾತನನ್ನು ಶ್ರೀಕೃಷ್ಣ ಮಠದ ಪರಿಸರದ ವಾದಿರಾಜ 3ನೇ ಕ್ರಾಸ್‌ ಬಳಿ ಪತ್ತೆ ಮಾಡಲಾಗಿದೆ.

ಆರೋಪಿಯು ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ ?

ಉಡುಪಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದನು. ಬಾಕ್ಲೇಟ್​​ ಆಮೀಶ ತೋರಿಸಿ ಈ ಕೃತ್ಯ ಎಸಗಿದ್ದನು. ಈತನನ್ನು ಬಂಧಿಸಲು ಪೊಲೀಸರು 5 ತಂಡಗಳನ್ನು ರಚಿಸಿಕೊಂಡು ತನಿಖೆ ಆರಂಭಿಸಿದ್ದರು.

ಪಾನಮತ್ತನಾಗಿ ನಗರದಲ್ಲಿ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದ ಬಾಗಲಕೋಟೆ ಮೂಲದ ಮುತ್ತು ಎಂಬಾತ ಈ ಕೃತ್ಯ ಎಸೆಗಿದ್ದನು. ಸಿಸಿಟಿವಿ ದೃಷ್ಯಾವಳಿಯನ್ನು ಆಧರಿಸಿ ಆರೋಪಿಗೆ ಬಲೆ ಬೀಸಿದ್ದ ಪೊಲೀಸರು ಆರೋಪಿಯನ್ನು ಕೃಷ್ಣಮಠದ ಪರಿಸರದಲ್ಲಿ ಪತ್ತೆಹಚ್ಚಿದ್ದಾರೆ. ಪೊಲೀಸರ ಈ ಕಾರ್ಯಚರಣೆಗೆ ಸಾರ್ವಜನಿಕರು ನೆರವು ನೀಡಿದ್ದಾರೆ. ಜೊತೆಗೆ ಆರೋಪಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

RELATED ARTICLES

Related Articles

TRENDING ARTICLES