ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಉಂಟಾಗಿದ್ದು. ಎಲೆಕ್ಟ್ರಿಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ. ಅಗ್ನಿ ಅನಾಹುತದಲ್ಲಿ 30ಕ್ಕು ಹೆಚ್ಚು ಬೈಕ್ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿರುವ ಶುಕ್ರಮೋಟರ್ಸ್ ಶೋರೂಂಗೆ ಬೆಂಕಿ ಹೊತ್ತಿಕೊಂಡಿದ್ದು. ಶೋರೂಂನಲ್ಲಿದ್ದ ವಕಿನೋವಾ ಕಂಪನಿಯ 30ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗೆ ಆಹುತಿಯಾಗಿದೆ. ಶಾರ್ಕ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ : ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸಾ*ವು !
ಬೆಂಕಿ ಹೊತ್ತಿಕೊಂಡಿರುವುದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳಿ ಬೆಂಕಿಯನ್ನು ಆರಿಸುವಲ್ಲ ಸಫಲರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಘಟನೆ ಸ್ಥಳಕ್ಕೆ ಆರ್ಟಿಓ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಎರಡು ತಿಂಗಳ ಹಿಂದೆ ಇದೇ ರಸ್ತೆಯಲ್ಲಿ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡು 50ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಕರಕಲಾಗಿದ್ದವು. ಈ ದುರಂತದಲ್ಲಿ ಓರ್ವ ಯುವತಿಯು ಸಾವನ್ನಪ್ಪಿದ್ದಳು.