ಬಿಗ್ಬಾಸ್ ಸೀಸನ್ 7 ಖ್ಯಾತಿಯ ಚೈತ್ರಾ ವಾಸುದೇವನ್ ಅವರು 2ನೇ ಮದುವೆಗೆ ಸಜ್ಜಾಗಿದ್ದಾರೆ. ಈ ಮೂಲಕ ಫ್ಯಾನ್ಸ್ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಮಾರ್ಚ್ನಲ್ಲಿ ಮದುವೆಯಾಗುತ್ತಿರುವುದಾಗಿ ಹೇಳಿದ್ದಾರೆ.
ಮೊದಲ ಮದುವೆಯನ್ನು ಮುರಿದುಕೊಂಡು ಕೆಲವರ್ಷಗಳ ನಂತರ ಮತ್ತೆ ಚೈತ್ರ ಮದುವೆಯಾಗುತ್ತಿದ್ದು. ಮದುವೆಗಾಗಿ ಪ್ಯಾರೀಸ್ನಲ್ಲಿ ಭರ್ಜರಿ ಶಾಪಿಂಗ್ ನಡೆಸುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಇನ್ಸ್ಟ್ಗ್ರಾಂನಲ್ಲಿ ತಮ್ಮ ಪ್ರೀ ವೆಡ್ಡಿಂಗ್ ಪೋಟೊಶೂಟ್ನ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ನೇಣು ಬಿಗಿದುಕೊಂಡು ವ್ಯಕ್ತಿ ಸಾ*ವು: ಕೊಲೆ ಮಾಡಿ ಆತ್ಮಹ*ತ್ಯೆಯ ನಾಟಕವಾಡಿದಳ ಐನಾತಿ ಹೆಂಡತಿ !
ನಾನು ನಿಮ್ಮೊಂದಿಗೆ ಹೃದಯಪೂರ್ವಕವಾದ ಒಂದು ಸಂತೋಷದ ಸುದ್ದಿ ಹಂಚಲು ಉತ್ಸುಕನಾಗಿದ್ದೇನೆ. ನಾನು ಈ ವರ್ಷ 2025ರ ಮಾರ್ಚ್ನಲ್ಲಿ ಜೀವನದ ಹೊಸ ಹೆಜ್ಜೆ ಇಡುತ್ತಿದ್ದೇನೆ. ನನ್ನ ವಿವಾಹದ ಸುಂದರ ಪ್ರಯಾಣ ಆರಂಭವಾಗಲಿದೆ. ಈ ಮುಂದಿನ ಹೆಜ್ಜೆ ಹಾಕುವಾಗ, ನಾನು ಈ ಹೊಸ ಅಧ್ಯಾಯಕ್ಕಾಗಿ ನಿಮ್ಮ ಪ್ರೀತಿ, ಆಶೀರ್ವಾದಗಳು ಮತ್ತು ಬೆಂಬಲವನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಭಾವಿ ಪತಿಯ ಜೊತೆ ಫೋಟೋಶೂಟ್ ಮಾಡಿಸಿದ್ದಾರೆ. ಆ ಹುಡುಗ ಯಾರು ಎನ್ನುವುದನ್ನು ಅವರು ರಿವೀಲ್ ಮಾಡಿಲ್ಲ. ಮಾರ್ಚ್ ತಿಂಗಳಿನಲ್ಲಿ ಮದುವೆಯಾಗುತ್ತಿದ್ದರೂ ಮದುವೆ ದಿನಾಂಕವನ್ನು ಅವರು ಇನ್ನೂ ತಿಳಿಸಿಲ್ಲ.