Monday, August 25, 2025
Google search engine
HomeUncategorizedವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ !

ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ !

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14ರವರೆಗೆ ದ್ರೌಪತಮ್ಮನ ಶಕ್ತ್ಯೋತ್ಸವ ಹನ್ನೊಂದು ದಿನಗಳ ಕಾಲ ನಡೆಯಲಿದೆ ಎಂದು ತಿಳಿದು ಬಂದಿದೆ.

ಕರಗ ಮಹೋತ್ಸವದಲ್ಲಿ ಈ ಬಾರಿಯೂ ಕೂಡ ಪೂಜಾರಿ ಎ.ಜ್ಞಾನೇಂದ್ರ ಕರಗವನ್ನು ಹೊರಲಿದ್ದಾರೆ. ಈಗಾಗಲೇ ಸತತವಾಗಿ ಕಳೆದ 14 ವರ್ಷಗಳಿಂದ ಕರಗವನ್ನು ಹೊತ್ತಿರುವ ಎ.ಜ್ಞಾನೇಂದ್ರ. 15ನೇ ಭಾರಿ ಕರಗ ಹೊರಲು ಆಯ್ಕೆಯಾಗಿದ್ದಾರೆ. ಜ.27ರಂದು ನಡೆದ ಸಭೆಯಲ್ಲಿ ಇವರನ್ನು ಕರಗ ಹೊರಲು ಆಯ್ಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗೃಹಜ್ಯೋತಿ ಹೊಡೆತಕ್ಕೆ ತತ್ತರಿಸಿದ ಬೆಸ್ಕಾಂ: ಹನುಮಂತನ ಬಾಲದಂತೆ ಬೆಳೆಯುತ್ತಿದೆ ಸಾಲದ ಹೊರೆ !

ಸಭೆಯಲ್ಲಿ ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಣಾಧಿಕಾರಿ ನವೀನ್, ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್, ಖಜಾಂಚಿ ಜಿ.ಬಾಲಕೃಷ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಅಮರನಾರಾಯಣ್ ಸಭೆ ನಡೆಸಿ ದಿನಾಂಕ ಹಾಗೂ ಕರಗ ಹೊರುವವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಎ. ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments