Tuesday, August 26, 2025
Google search engine
HomeUncategorizedಮೌನಿ ಅಮಾವಾಸ್ಯೆ ಹಿನ್ನಲೆ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರ ಆಗಮನ !

ಮೌನಿ ಅಮಾವಾಸ್ಯೆ ಹಿನ್ನಲೆ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರ ಆಗಮನ !

ಪ್ರಯಾಗ್​ರಾಜ್ : ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಇದರ ನಡುವೆ ಬುಧವಾರ ಮೌನಿ ಅಮವಾಸೆ ಹಿನ್ನಲೆ ಕೋಟ್ಯಾಂತರ ಭಕ್ತರು ಭೇಟಿ ನೀಡುವ ಸಾಧ್ಯತೆ ಇದ್ದು. ತ್ರಿವೇಣಿ ಸಂಗಮದಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕುಂಭಮೇಳಕ್ಕೆ ಜನರು ಬರುತ್ತಿರುವ ದೃಷ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಮಹಾಕುಂಭ ನಗರದ ತ್ರಿವೇಣಿ ಮಾರ್ಗ, ಕಾಳಿ ಮಾರ್ಗ ಸೇರಿದಂತೆ ಸಂಗಮದ ಸುತ್ತಮುತ್ತಲಿನ ರಸ್ತೆಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಜನರ ನಿಯಂತ್ರಣಕ್ಕೆ ಅಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ಭಕ್ತರ ಓಡಾಟಕ್ಕೆ ಅನುಕೂಲವಾಗಲು ಈ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತರ ರಾಜ್ಯ, ದೇಶಗಳಿಂದ ಬರುವ ವಾಹನಗಳಿಗೆ ನಗರದ ಹೊರವಲಯದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಸಂಗಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಟ್ ಅಳವಡಿಸಲಾಗಿದೆ.

ಇದನ್ನೂ ಓದಿ : ‘ಸರಿಗಮಪ’ ಖ್ಯಾತಿಯ ಮಂಜಮ್ಮ ವಿಧಿವಶ !

ಮೌನಿ ಅಮವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚುವ ಕಾರಣ ಐದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇಂಟಿಗ್ರೇಟೆಡ್ ಕಂಟ್ರೋಲ್ ಮತ್ತು ಕಮಾಂಡ್ ಸೆಂಟರ್ ಸಂಗಮದ ಬಳಿ ನಿಗಾ ಇರಿಸಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ 3 ಕೋಟಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ.

ಮೌನಿ ಅಮವಾಸ್ಯೆ ಹಿನ್ನಲೆ ಇಂದು ರಾತ್ರಿಯಿಂದಲೆ ಅಮೃತ ಸ್ನಾನ ಆರಂಭವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು. ಪ್ರಯಾಗ್​ ರಾಜ್​ ಬೇಟಿ ನೀಡುವ ಭಕ್ತರು ಅಯೋದ್ಯೆ ಮತ್ತು ವಾರಣಾಸಿಗೂ ಭೇಟಿ ನೀಡುತ್ತಿದ್ದು. ಅಲ್ಲಿಯೂ ಭಾರಿ ಜನಸಂದಣಿ ಉಂಟಾಗಿದೆ ಎಂದು ತಿಳಿದು ಬಂದಿದೆ. ಈವೆರೆಡು ದೇವಾಲಯಗಳಲ್ಲಿ ತಡರಾತ್ರಿಯವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments