Thursday, February 13, 2025

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಮೂವರು ಸಾ*ವು !

ಮೈಸೂರು: ಬೈಕ್​ ಮತ್ತು ಕಾರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ನಂಜನಗೂಡು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯ ಹಿರೀಕಾಟಿ ಗ್ರಾಮದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಚಿಕ್ಕದೇವಮ್ಮನ ಬೆಟ್ಟಕ್ಕೆ ಪೂಜೆಗೆ ಎಂದು ತೆರಳಿ ಪೂಜೆ ಮುಗಿಸಿ ವಾಪಾಸ್​ ಬರುವ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಂಜನಗೂಡಿನ ತಾಲ್ಲೂಕಿನ ಕುಡ್ಲಾಪುರ ಗ್ರಾಮದ ಶಶಿಧ‌ರ್ (40), ಶಾಲಿನಿ(35), ತಾಯಿ ಭಾಗ್ಯಮ್ಮ(55) ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಉಡುದಾರದಿಂದ ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಸಾ*ವು : ನೋಡುತ್ತ ನಿಂತ ತಂಗಿ !

ಓರ್ವ ವ್ಯಕ್ತಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಬೇಗೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES