Friday, January 31, 2025

ಮಹಿಳೆಯನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು !

ರಾಯಚೂರು : ಸಾರ್ವಜನಿಕವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಗ್ರಾಮದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಕಾರಣಕ್ಕೆ ಮಹಿಳೆಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಯಚೂರು ಜಿಲ್ಲೆಯ, ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು. ಜನವರಿ 27ರಂದು ಸಂಜೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ಬಸವರಾಜ್​ ಎಂಬಾತನ ಅಣ್ಣ ದುರ್ಗಪ್ಪ ಕಳೆದ 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ಸಾವನ್ನಪ್ಪಿದ್ದರು.

ಇದನ್ನೂ ಓದಿ : ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : ಘಟನೆಗೆ ಯೋಗಿ ಸರ್ಕಾರವೇ ಹೊಣೆ ಎಂದ ಖರ್ಗೆ !

ಮಹಿಳೆಯೊಂದಿಗೆ ದುರ್ಗಪ್ಪನಿಗೆ ಪರಿಚಯವಿತ್ತು. ಇದೇ ಕಾರಣಕ್ಕೆ ಸಾಯುವ ದಿನ ಮಹಿಳೆ ಜೊತೆ ತೆರಳಿದ್ದಾಗ ದುರ್ಗಪ್ಪ ಸಾವನ್ನಪ್ಪಿದ್ದನು ಎಂದು ಶಂಕಿಸಲಾಗಿತ್ತು. ಇದೇ ಕಾರಣಕ್ಕೆ ಮಹಿಳೆಯ ಮೇಲೆ ಅನುಮಾನ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ.

ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾ ಎಂಬುವವರಿಂದ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂದು ತಿಳಿದು ಬಂದಿದೆ. ನೂರಾರು ಜನರ ಎದುರು ಮಹಿಳೆಗೆ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದು. ಆರೋಪಿಗಳ ವಿರುದ್ದ ಜಾಲಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES