Sunday, April 13, 2025

ಮೈಕ್ರೋ ಫೈನಾನ್ಸ್​ ಕಿರುಕುಳ: ತಾಯಿ ಆತ್ಮಹ*ತ್ಯೆ ಸುದ್ದಿ ತಿಳಿದು, ಮಗನೂ ಆತ್ಮಹ*ತ್ಯೆಗೆ ಶರಣು

ಮಂಡ್ಯ : ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಮೂರು ದಿನದ ಹಿಂದೆ ಮಂಡ್ಯದ ಪ್ರೇಮ ಎಂಬ ಮಹಿಳೆ ವಿಷದ ಮಾತ್ರಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ತಾಯಿಯನ್ನು ಕಳೆದುಕೊಂಡ ಮಗನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಹೌದು.. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಕಳೆದ ಕೆಲ ದಿನಗಳಿಂದ ಸಾಕಷ್ಟು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಙ ಹೊರಡಿಸುತ್ತೇವೆ ಎಂದು ಕಾಲ ಕಳೆಯುತ್ತಿದೆ. ಇದೇ ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಮಂಡ್ಯದ ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮ ಎಂಬ ಮಹಿಳೆ ಜನವರಿ 29ರಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಜಿಲ್ಲಾಸ್ಪತ್ರೆಗೆ ದಾಖಲಿಸಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ವಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾ*ವು: ವೈದ್ಯರ ನಿರ್ಲಕ್ಷ ಎಂದ ಕುಟುಂಬಸ್ಥರು

ತಾಯಿಯನ್ನು ಕಳೆದುಕೊಂಡು ನೋವಿನಲ್ಲಿದ್ದ ಆಕೆಯ ಮಗ ರಂಜಿತ್​(30) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದ್ದು. ಹಲಗೂರು ಕೆರೆಯಲ್ಲಿ ರಂಜಿತ್​ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ತಾಯಿ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಮೈಕ್ರೋ ಫೈನಾನ್ಸ್​ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES