ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಮಾರ್ಗ ಮಧ್ಯ ಅಪಘಾತ ಸಂಭವಿಸಿದ್ದು. ದಾವಣಗೆರೆಯ ಜೈನ್ ಪಬ್ಲಿಕ್ ಸ್ಕೂಲ್ಗೆ ಸೇರಿದ್ದ ಶಾಲಾ ಬಸ್ ಅಪಘಾತವಾಗಿದ್ದು. ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯವು ವೇಳೆ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿದೆ.
ಇದನ್ನೂ ಓದಿ :ಕೇಂದ್ರ ಬಜೆಟ್ ಬದಲು, ಬಿಹಾರ್ ಬಜೆಟ್ ಮಂಡನೆಯಾಗಿದೆ: ಸಂಸದ ಶ್ರೇಯಸ್ ಪಟೇಲ್
ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದ್ದು. ಸ್ಥಳೀಯರು ಮಕ್ಕಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.