ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲೆಗಳಲ್ಲಿನ ಉತ್ತೀರ್ಣದ ಮಾನದಂಡಗಳ ಬಗ್ಗೆ ದೆಹಲಿಯ ಮಕ್ಕಳ ಜೊತೆ ಅವರು ಚರ್ಚಿಸಿದರು. ಈ ವೇಳೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.
ಈ ಸರ್ಕಾರ ಯಾರು ಪರೀಕ್ಷೆಯಲ್ಲಿ ಪಾಸ್ ಆಗುತ್ತಾರೆಂಬ ಖಾತರಿ ಇರುತ್ತದೆಯೋ ಅಂತಹ ವಿದ್ಯಾರ್ಥಿಗಳನ್ನು ಮಾತ್ರ 9ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸಲು ಬಿಡುತ್ತಿತ್ತು ಎಂದು ನಾನು ಕೇಳಿದ್ದೇನೆ. ಸರ್ಕಾರದ ಮೇಲೆ ಕೆಟ್ಟ ಹೆಸರು ಬರಬಾರದೆಂದು ಈ ರೀತಿ ಮಾಡಲಾಗುತ್ತಿದೆ ಎಂದು ನನಗೆ ಮಾಹಿತಿ ಸಿಕ್ಕಿದೆ. ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಬಹಳ ಗಂಭೀರ ಪರಿಣಾಮ ಬೀರಿದೆ ಎಂದು ಮೋದಿ ಟೀಕಿಸಿದ್ದಾರೆ.
ಇದನ್ನೂ ಓದಿ :ಕನ್ನಡ MA ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಸಾ*ವು
ಇದೇ ಫೆಬ್ರವರಿ 05ರಂದು ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಶತಾಯ ಗತಾಯ ಡೆಲ್ಲಿ ಗದ್ದುಗೆಯನ್ನು ಹಿಡಿಯಲು ಬಿಜೆಪಿ ಯತ್ನಿಸುತ್ತಿದೆ. ಕಳೆದ 27 ವರ್ಷಗಳಿಂದ ರಾಷ್ಟ್ರ ರಾಜಧಾನಿಯ ಮೇಲಿನ ಹಿಡಿತವನ್ನು ಕಳೆದುಕೊಂಡಿರುವ ಬಿಜೆಪಿ ಈ ಬಾರಿ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ಬೀಳಿಸಿ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ.