ಕೋಲ್ಕತ್ತಾ : ಪಶ್ಚಿಮ ಬಂಗಾಳಕ್ಕೆ ಬಾಂಗ್ಲಾ ಎಂದು ಮರು ನಾಮಕಾರಣ ಮಾಡಬೇಕು ಎಂದು ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಬೇಡಿಕೆ ಮುಂದಿಟ್ಟಿದ್ದು. ಟಿಎಂಸಿ ಸಂಸದ ರಿತಭ್ರತ್ ಬ್ಯಾನರ್ಜಿ ಅವರು ರಾಜ್ಯ ಸಭೆಯಲ್ಲಿ ಈ ಬೇಡಿಕೆ ಇಟ್ಟಿದ್ದಾರೆ.
ರಾಜ್ಯಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದ ರಿತಭ್ರತ್ ಬ್ಯಾನರ್ಜಿ ಅವರು, 2018ರಲ್ಲೇ ಪಶ್ಚಿಮ ಬಂಗಾಳ ವಿಧಾನಸಭೆ ರಾಜ್ಯಕ್ಕೆ ಮರುನಾಮಕರಣ ಬೇಡಿಕೆಯನ್ನು ಎತ್ತಿ ಹಿಡಿದಿದೆ. ಅದರೆ, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಬಾಂಗ್ಲಾ ಎಂದು ನಾಮಕರಣವಾದರೆ ಇತಿಹಾಸ ಹಾಗೂ ಸಂಸ್ಕೃತಿಯನ್ನು ಅದು ಎತ್ತಿ ಹಿಡಿಯುತ್ತದೆ ಎಂದು ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ:ಅಕ್ರಮ ಸಂಬಂಧ ಬೆಳೆಸುವಂತೆ ಒತ್ತಾಯ: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹ*ತ್ಯೆ
ಈ ಕುರಿತು ಪಶ್ಚಿಮ ಬಂಗಾಳ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಂಸದ ರಿತಭ್ರತ್ ಬ್ಯಾನರ್ಜಿ ಆರೋಪಿಸಿದ್ದಾರೆ.