ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಮುದ್ದನಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು. ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಹೋಗುವಾಗ ರಸ್ತೆಯಲ್ಲಿ ಕಾರಿನ ಟೈರ್ ಪಂಚರ್ ಆಗಿದ್ದು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಹೊಂಡಕ್ಕೆ ಉರುಳಿದೆ.
ಇದನ್ನೂ ಓದಿ :ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ: ಶ್ರೀಲಂಕಾ-ಭಾರತ ನಡುವೆ ಹಣಾಹಣಿ
ಅಪಘಾತದಲ್ಲಿ ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು. ಕಾರಿನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ತಾಲ್ಲೂಕ್ ಆಸ್ಪತ್ರೆಗೆ ರವಾನಿಸಿದ್ದು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.