ಯಾದಗಿರಿ : KSRTC ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಅಪಘಾತದ ನಡೆದಿದ್ದು. ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಬೈಕ್ಗೆ KSRTC ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾನು ಸಿದ್ದ: ರಾಜ್ಯದಲ್ಲಿ 150 ಸೀಟ್ ಗೆಲ್ಲಿಸುತ್ತೇನೆ : ಶ್ರೀರಾಮುಲು
ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳು ಎಂದು ಗುರುತಿಸಿದ್ದು. ಹೆಂಡತಿಯ ತವರೂರಿಗೆ ಹೋಗಿ ವಾಪಾಸ್ ಬರುವ ವೇಳೆ ಜವರಾಯನಾಗಿ ಅಡ್ಡ ಬಂದ ಸಾರಿಗೆ ಬಸ್ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.