ಪ್ರಯಾಗ್‌ರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಗ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದಾರೆ. ಧಾರ್ಮಿಕ ಸ್ನಾನಕ್ಕೂ ಮುನ್ನ, ಅವರು ಸಂಗಮದಲ್ಲಿ ಹೂವುಗಳು ಮತ್ತು ತೆಂಗಿನಕಾಯಿಯನ್ನು ಅರ್ಪಿಸಿದರು ಮತ್ತು ‘ಅರ್ಘ್ಯ’ ಮಾಡುವ ಮೂಲಕ ಭಗವಾನ್ ಸೂರ್ಯನಿಗೆ ನಮಸ್ಕರಿಸಿದರು.
ಪ್ರಯಾಗ್‌ರಾಜ್‌ಗೆ ಬಂದಿಳಿದ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್‌ರಾಜ್‌ನಲ್ಲಿ ಸಮಯ ಕಳೆಯಲಿದ್ದು. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಇದನ್ನೂ ಓದಿ :‘ರೀ ಡಾಬಾ ಬಂತು ಊಟ ಮಾಡ್ರೀ’: ಸತ್ತ ಗಂಡನಿಗೆ ಮರುಜೀವ ನೀಡಿದ ಹೆಂಡತಿ !
ಭಾನುವಾರ ತ್ರಿವೇಣಿ ಸಂಗಮದಲ್ಲಿ ಸುಮರು 8.4 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ಶುರುವಾದಾಗಿನಿಂದ ಇಲ್ಲಿಯವರೆಗೆ 42 ಕೋಟಿಗೂ ಅಧಿಕ ಜನರು ತ್ರಿವೇಣಿಯಲ್ಲಿ ಮಿಂದೆದ್ದಿದ್ದಾರೆ. ಫೆಬ್ರವರಿ 05ರಂದು ಪ್ರಧಾನಿ ನರೇಂದ್ರ ಮೋದಿ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದರು. ಅವರಿಗೂ ಮುನ್ನ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೇರಿದಂತೆ ಅನೇಕ ರಾಜಕೀಯ ನಾಯಕರು, ಸಿನಿಮಾ ಗಣ್ಯರು ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ದರು.