ಮೈಸೂರು : ಉದಯಗಿರಿ ಗಲಾಟೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು. ಮೈಸೂರಿನ ಗಲಾಟೆಯಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಾನು ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಹೇಳಿದರು.
ಪೊಲೀಸರಿಗೆ ಕಾಮನ್ ಸೆನ್ಸ್ ಇಲ್ಲ, ಅವರು ಉದಯಗಿರಿ ದಾಂಧಲೆಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ರಾಜಣ್ಣ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು. ‘ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಪೊಲೀಸರದ್ದು ಯಾವ ತಪ್ಪು ಇಲ್ಲ.ಪೊಲೀಸರು ಸರಿಯಾಗಿಯೇ ಕೆಲಸ ಮಾಡಿದ್ದಾರೆ. ಸರಿಯಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರು ಕೂಡ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ :ಬಿರು ಬೇಸಿಗೆಯಲ್ಲಿ ಬಸವಳಿಯಲಿದ್ದಾರೆ ರಾಜ್ಯದ ಜನತೆ: ಹವಮಾನ ಇಲಾಖೆ ಎಚ್ಚರಿಕೆ
ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ. ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ಸಚಿವ ರಾಜಣ್ಣ ಅವರು ಈ ವಿಚಾರದಲ್ಲಿ ಹೇಳಿರುವ ಮಾತಿಗೆ ಸಿಎಂ ಉತ್ತರ ಕೊಡುತ್ತಾರೆ. ಸಿಎಂಗೆ ಸದ್ಯಕ್ಕೆ ಮಾತನಾಡಲು ಆಗುತ್ತಿಲ್ಲ. 8 ರಿಂದ 10ದಲ್ಲಿ ಅವರೇ ಮಾತನಾಡುತ್ತಾರೆ. ನಾನು ಮೈಸೂರಿನ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ.ನಮ್ಮ ಪೊಲೀಸರದ್ದು ಯಾವ ತಪ್ಪು ಇಲ್ಲ ಎಂದು ಡಿ,ಕೆ ಶಿವಕುಮಾರ್ ಹೇಳಿಕೆ ನೀಡಿದರು.