Sunday, February 23, 2025

KSRTC ಬಸ್​ ಮತ್ತ ಬೈಕ್​ ನಡುವೆ ಅಪಘಾತ: ಓರ್ವ ಸಾ*ವು

ತುಮಕೂರು : ಬೈಕ್ ಮತ್ತು KSRTC ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು ಅವಿನಾಶ್​ ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ಬಳಿಯಲ್ಲಿ ಅಪಘಾತ ಸಂಭವಿಸಿದ್ದು. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ತಿಪಟೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್​ ಸವಾರ ಅವಿನಾಶ್​ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಹುಟ್ಟೂರಿನಲ್ಲಿ ಶಾಲಾ ಮಕ್ಕಳೊಂದಿಗೆ ಊಟ ಸವಿದ ಮದುಮಗ ಧನಂಜಯ್​

ಮೃತ ಅವಿನಾಶ್​ ಶೆಟ್ಟಿಕೆರೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು. ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES