ಹಾಸನ : ಮೈಸೂರು ಗಲಭೆ ಪ್ರಕರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನವರು ಮುಸ್ಲಿಂರು ಕೊಟ್ಟ ಭಿಕ್ಷೆಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಾಸನ ಜಿಲ್ಲೆ, ಸಕಲೇಶಪುರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದು. ‘ಕಾಂಗ್ರೆಸ್ನಲ್ಲಿ ಒಂದು ಸಿದ್ದರಾಮಯ್ಯ ಬಣ, ಇನ್ನೊಂದು ಡಿ.ಕೆ.ಶಿವಕುಮಾರ್ ಬಣ ಇದೆ, ಇಬ್ಬರು ಒಂದೊಂದು ದಾರಿ ಇಡಿದಿದ್ದಾರೆ. ಮೈಸೂರಿನಲ್ಲಿ ಪೊಲೀಸ್‌ರ ಮೇಲೆ ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪೊಲೀಸರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿದ್ದರೆ ಇಡೀ ಪೊಲೀಸ್ ಸ್ಟೇಷನ್ ಹೊತ್ತಿ ಉರಿಯುತ್ತಿತ್ತು. ಪೊಲೀಸರು ಎಚ್ಚರಿಕೆಯಿಂದ ಕ್ರಮ ತೆಗೆದುಕೊಂಡು ಯಾವುದೇ ಅನಾಹುತ ಆಗದಂತೆ ಕ್ರಮ ತೆಗೆದುಕೊಂಡಿದ್ದಾರೆ.
ಮುಸ್ಲಿಂಮರ ಋಣದಲ್ಲಿ ಕಾಂಗ್ರೆಸ್ !
ಕಾಂಗ್ರೆಸ್‌ನವರು ಮುಸ್ಲಿಂಮರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದಾರೆ. ಇದೀಗ ಅವರು ಭಿಕ್ಷೆ ಕೊಟ್ಟವರ ಋಣ ತೀರಿಸಲು ನಿಂತಿದ್ದಾರೆ. ಅವನ್ಯಾವನೋ ಕಳ್ಳ ಯಾವ ರೀತಿ ಭಾಷಣ ಮಾಡಿದ್ದಾನೆ. ಬೆಂಕಿ ಹಚ್ಚಲು ಏನೇನು ಹೇಳಬೇಕು ಅಷ್ಟು ಹೇಳಿದ್ದಾರೆ. ಅವನನ್ನು ಇದುವರೆಗೂ ಬಂಧಿಸಿಲ್ಲ. ಎಲ್ಲಾ ಮಂತ್ರಿಗಳು ಪೊಲೀಸರಿಗೆ ಥೂ ಅನ್ನುವ ಪದ ಬಳಸುತ್ತಾರೆ. ಕಾಂಗ್ರೆಸ್‌ನವರ ಅಪ್ಪನ ಮನೆಯಿಂದ ಪೊಲೀಸರಿಗೆ ಸಂಬಳ ಕೊಡುತ್ತಿಲ್ಲ. ಅವರಿಗೆ ಸ್ಟಾರ್, ಬ್ಯಾಡ್ಜ್‌ನ್ನು ಕಾಂಗ್ರೆಸ್‌ನವರು ಅವರ ಅಪ್ಪನ ಮನೆಯಿಂದ ತಂದುಕೊಟ್ಟಿಲ್ಲ. ಜನಗಳ ಟ್ಯಾಕ್ಸ್‌ನಲ್ಲಿ ಕೊಟ್ಟಿರುವುದು.
ಇದನ್ನೂ ಓದಿ :ಶೆಡ್ಡಿಗೆ ಬೆಂಕಿ: ಎರಡು ಆಕಳು ಮತ್ತು ಕರು ಬೆಂಕಿಗೆ ಆಹುತಿ !
ಪೊಲೀಸರನ್ನು ಹೀನಾಯವಾಗಿ, ಕೆಟ್ಟ ಪದ ಬಳಕೆ ಮಾಡಿ ಅವರ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ. ಪೊಲೀಸರಿಗೆ ಈ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ. ಇಡೀ ಘಟನೆ ಮುಚ್ಚಿ ಹಾಕಲು ಕಾಂಗ್ರೆಸ್‌ನವರು ಹುನ್ನಾರ ಮಾಡುತ್ತಿದ್ದಾರೆ. ಈ ಕೇಸ್‌ನಲ್ಲಿ ಅಂತಿಮವಾಗಿ ಪೊಲೀಸರೇ ಅಪರಾಧಿಗಳಾಗುತ್ತಾರೆ. ಪೊಲೀಸರನ್ನೇ ಸಸ್ಪೆಂಡ್ ಮಾಡಬಹುದು, ಅಷ್ಟರಮಟ್ಟಿಗೆ ಮುಸ್ಲಿಂರನ್ನು ಓಲೈಸುತ್ತಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು, ಮಾನ, ಮರ್ಯಾದೆ ಇದೆಯೇ ಇವರಿಗೆ.
ಅಧಿಕಾರಿಗಳಿಗೆ ನೈತಿಕೆ ಬೆಂಬಲ ಕೊಡುವುದರ ಬದಲು ತೆಗಳುತ್ತಿದ್ದಾರೆ. ಹಾದಿಬೀದಿಯಲ್ಲಿ ಹೋಗುವ ಜನ ಇನ್ಮುಂದೆ ಪೊಲೀಸರನ್ನು ಏಕವಚನದಲ್ಲಿ ಮಾತನಾಡಿಸುತ್ತಾರೆ. ಒಬ್ಬ ಮಂತ್ರಿನೇ ಏಕವಚನದಲ್ಲಿ ಮಾತನಾಡುತ್ತಾರೆ. ಇದು ಇಡೀ ರಾಜ್ಯದ ಪೊಲೀಸರು, ಹಿರಿಯ ಅಧಿಕಾರಿಗಳಿಗೆ ಮಾಡಿದ ಅವಮಾನ
ಕೂಡಲೇ ಈ ಸರ್ಕಾರ ಪೊಲೀಸರ ಕ್ಷಮೆ ಕೇಳಬೇಕು. ಇಲ್ಲವಾದರೆ ಜನ ನಿಮ್ಮನ್ನು ಎಲ್ಲಿಗೆ ಕಳುಹಿಸಬೇಕೋ, ಗಂಟು, ಮೂಟೆ ಕಟ್ಟಿ ಕಳುಹಿಸುತ್ತಾರೆ ಎಂದು ಕಾಂಗ್ರೆಸಿಗರ ಮೇಲೆ ವಾಗ್ದಾಳಿ ನಡೆಸಿದರು.