ಬೆಂಗಳೂರು : ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸುವ ಇಚ್ಚೆಯನ್ನು ವ್ಯಕ್ತಪಡಿಸಿದ್ದರು. ಈ ಹೇಳಿಕೆ ಕುರಿತು ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ ನೀಡಿದ್ದು. ಸಿದ್ದರಾಮಯ್ಯನವರು ಇರಬೇಕು ಎಂಬ ಆಶಯ ನಮಗೂ ಇದೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರು. ಅವರು ಸಕ್ರಿಯ ರಾಜಕಾರಣದಲ್ಲಿರಬೇಕು ಎಂದು ಹೇಳಿದರು.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ‘ ಸಿದ್ದರಾಮಯ್ಯನವ್ರು ಇರಬೇಕು ಅಂತಾ ನಮ್ಮ ಆಶಯ ಕೂಡ ಇದೆ. ಚುನಾವಣೆ ರಾಜಕೀಯದಿಂದ ನಿವೃತ್ತಿ ಆದ್ರೂ ಸಕ್ರಿಯ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯನವರು ಇರಬೇಕು. ಆಗಲೇ ಚುನಾವಣೆ ಗೆಲ್ಲಲು ಸಾಧ್ಯವಾಗುತ್ತೆ. ಇನ್ನೊಂದು ಅವಧಿಯವರೆಗೂ ಅವರು ರಾಜಕೀಯದಲ್ಲಿರಬೇಕು ಎಂದು ಹೇಳಿದರು.
ಇದನ್ನೂ ಓದಿ :ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಧನು-ಧನ್ಯತಾ !
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ !
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಖರ್ಗೆ ಅವರು ತೀರ್ಮಾನ ಮಾಡ್ತಾರೆ. ಕರ್ನಾಟಕ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದು ಹೇಳಿದರು.