Wednesday, April 2, 2025

ಗಂಡು ಮಗುವಿಗೆ ಜನ್ಮ ನೀಡಿದ್ದ 6 ದಿನದ ಬಾಣಂತಿ ಸಾ*ವು !

ಶಿವಮೊಗ್ಗ: ಹೆರಿಗೆಯಾದ ಆರು ದಿನಕ್ಕೆ ಬಾಣಂತಿಯೋರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ಮೃತ ಮಹಿಳೆಯನ್ನು 25 ವರ್ಷದ ಮಂಜುಳ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮ ಮಂಜುಳ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಹೆರಿಗೆಗಾಗಿ ಫೆ. 9 ರಂದು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಮಹಿಳೆ ದಾಖಲಾಗಿದ್ದರು. ಫೆ.10ರಂದು ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆಯ ನಂತರ ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿತ್ತು.

ಇದನ್ನೂ ಓದಿ:KSRTC ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೊರ್ವ ಗಂಭೀರ

ಆರೋಗ್ಯದಲ್ಲಿ ಏರುಪೇರಾದ ಕಾರಣ ಮಹಿಳೆಯ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

RELATED ARTICLES

Related Articles

TRENDING ARTICLES