ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಕುಂಭಮೇಳಕ್ಕೆ ತೆರಳಲು ಜನರು ಒಟ್ಟಿಗೆ ರೈಲ್ವೇ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಜಮಾಯಿಸಿದ ಕಾರಣ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ನಾವೇನೋ ಸತ್ತೋಗಿದಿವಿ ಓಕೆ, ನೀನು ಏನ್ ಮಾಡಿದ್ದೀಯಾ: ಡಿ.ಕೆ ಶಿವಕುಮಾರ್
ಅಗತ್ಯಕ್ಕಿಂತ ಹೆಚ್ಚಿನ ಜನರು ಒಮ್ಮೆಲೆ ರೈಲ್ವೇ ನಿಲ್ದಾಣದ ಫ್ಲಾಟ್ಪಾರ್ಮ್ ಸಂಖ್ಯೆ 14 ಮತ್ತು 15ರಲ್ಲಿ ಜಮಾಯಿಸಿದ ಕಾರಣ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು. ಘಟನೆ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದ್ದು. ಗಾಯಾಳುಗಳಿಗೆ 2.5 ಲಕ್ಷ ಪರಿಹಾರ ಘೋಷಿಸಲಾಗಿದೆ.