ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಪೌರ ಕಾಶ್ ಪಟೇಲ್ ಅವರು ಇಂದು FBI ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ಗೆ 9ನೇ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ವಿಶೇಷವೆಂದರೆ ಅಮೇರಿಕಾದಲ್ಲೂ ಹಿಂದೂ ಸಂಸ್ಕೃತಿ ಮರೆಯದ ಇವರು ಭಗವದ್ಗೀತೆ ಮೇಲೆ ಕೈಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶ್ವೇತಭವನದ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಶ್ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದು. ಈ ವೇಳೆ ಅವರ ಗೆಳತಿ ಮತ್ತು ಕುಟುಂಬ ಸದಸ್ಯರು ಇವರಿಗೆ ಸಾಥ್ ನೀಡಿದ್ದಾರೆ. ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ಕಾಶ್ ಪಟೇಲ್ ಯಾರು?
ಕಾಶ್ ಪಟೇಲ್ ತಂದೆ-ತಾಯಿ ಗುಜರಾತ್ ಮೂಲದವರು. ಪಟೇಲ್ ಪೋಷಕರು ಅಮೆರಿಕದಲ್ಲಿ ನೆಲೆಸುವುದಕ್ಕಿಂತ ಮೊದಲು ಉಗಾಂಡದಲ್ಲಿದ್ದರು. ಅಲ್ಲಿಂದ ಕೆನಡಾಗೆ ಬಂದರು. ಈ ವೇಳೆ ಕಾಶ್ ಪಟೇಲ್ ತಂದೆಗೆ ಅಮೆರಿಕ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿ ಕೆಲಸ ಸಿಕ್ಕಿದ್ದರಿಂದ ಅವರು ಕುಟುಂಬ ಸಮೇತರಾಗಿ ಅಮೆರಿಕಾಗೆ ಬಂದು ನೆಲೆಸಿದರು.
ಇದನ್ನೂ ಓದಿ :ಪ್ರತಾಪ್ ಸಿಂಹನನ್ನು ಯಾಕೆ ಒದ್ದು ಒಳಗೆ ಹಾಕಿಲ್ವೋ ಗೊತ್ತಿಲ್ಲ: ಪ್ರದೀಪ್ ಈಶ್ವರ್
ನ್ಯೂಯಾರ್ಕ್‌ನ ಗಾರ್ಡನ್ ಸಿಟಿಯಲ್ಲಿ 1980ರಲ್ಲಿ ಕಾಶ್ ಪಟೇಲ್ ಜನಿಸಿದರು. ಇಲ್ಲಿಯೇ ಅವರು ಕಾಲೇಜು ಶಿಕ್ಷಣ ಪಡೆದರು. ನಂತರ ರಿಚ್ಚಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ನಲ್ಲಿ ಪದವಿ ಪಡೆದರು. ಸಾರ್ವಜನಿಕ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳಲ್ಲಿ ಕೆಲಸ ಮಾಡಿದರು.