ತುಮಕೂರು: ಕೆಲ ದಿನಗಳಿಂದ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಕೂಗು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದೆ. ಇದರ ನಡುವೆ ಗೃಹ ಸಚಿವ ಪರಮೇಶ್ವರ್ ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀನಾಮೆಯ ಮಾತನಾಡಿದ್ದು. ಇದರಿಂದಾಗಿ ಕಾರ್ಯಕರ್ತರು ವಿಚಲಿತರಾಗಿದ್ದಾರೆ.
ಹೌದು.. ತುಮಕೂರಿನ ಕೊರಟಗೆರೆಯಲ್ಲಿರುವ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಪರಮೇಶ್ವರ್ ರಾಜೀನಾಮೆಯ ಮಾತನಾಡಿದ್ದಾರೆ. ಕಾರ್ಯಕರ್ತರೊಂದಿಗೆ ಹೆಚ್ಚು ಬೆರೆಯಲು ಸಾಧ್ಯವಾಗುತ್ತಿಲ್ಲ. ಅವರ ಮನದಾಳಕ್ಕೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ಹೊರಹಾಕಿದ್ದು. ನೀವು ಹೇಳಿದ್ರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಹರಿದ ಖಾಸಗಿ ಬಸ್: ಇಬ್ಬರು ಸಾ*ವು
ನಿಮಗೆಲ್ಲ ನಿರಾಸೆಯಾಗಿರಬಹುದು ನಿಮ್ಮ ಕೈಗೆ ಸಿಗೋದಿಲ್ಲ, ಪಂಚಾಯಿತಿಗೆ ಬರೋದಿಲ್ಲ, ನಮನ್ನ ಮಾತಾಡಿಸೋದಿಲ್ಲ. ಇದೆಲ್ಲಾ ನಮಗೂ ಅನಿಸುತ್ತೆ ನಿಮಗೂ ಅನಿಸುತ್ತೆ. ಆದರೆ ಸಮಯ ನನ್ನ ಕೈಯಲ್ಲಿ ಇಲ್ಲ. ನೀವೆಲ್ಲಾ ದೊಡ್ಡ ಮನುಸ್ಸು ಮಾಡಿ ಒಂದೇ ಮಾತಲ್ಲಿ ಹೇಳಿಬಿಟ್ರೆ ನಾಳೇನೆ ರಾಜೀನಾಮೆ ಕೊಡುತ್ತೇನೆ. ಆಗ ನಾನು ನಿಮ್ಮ ಜೋತೆಯಲ್ಲಿ ಇರುತ್ತೆನೆ ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾದ ಕಾರ್ಯಕರ್ತರು ನೀವು ಇನ್ನೂ ಮುಖ್ಯಮಂತ್ರಿಯಾಗಬೇಕು ರಾಜಿನಾಮೇಯ ಮಾತಾಡಬೇಡಿ ಎಂದು ಕೂಗಲು ಆರಂಭಿಸಿದರು.