Sunday, February 23, 2025

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಹರಿದ ಖಾಸಗಿ ಬಸ್: ಇಬ್ಬರು ಸಾ*ವು

ಹಾಸನ : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಖಾಸಗಿ ಬಸ್​ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೃತ ದುರ್ದೈವಿಗಳನ್ನು 60 ವರ್ಷದ ಸುರೇಶ್​ ಮತ್ತು 55 ವರ್ಷದ ಕುಮಾರ್​ ಎಂದು ಗುರುತಿಸಲಾಗಿದೆ.

ಹಾಸನ ತಾಲ್ಲೂಕಿನ, ಕೆಂಚಟ್ಟಹಳ್ಳಿ ಬಳಿ ಘಟನೆ ನಡೆದಿದ್ದು. ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲ್ಲೂಕಿನ, ಆನಗೋಳು ಗ್ರಾಮದವರಾದ ಸುರೇಶ್​, ಕುಮಾರ್​ ಮತ್ತು ದಿನೇಶ್​ ಧರ್ಮಸ್ಥಳಕ್ಕೆ ಇಂದು ಮುಂಜಾನೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಬಸ್​ವೊಂದು ಡಿಕ್ಕಿ ಹೊಡೆದಿದ್ದು. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಇಂಡೋ-ಪಾಕ್​ ನಡುವೆ ಹೈ ವೋಲ್ಟೇಜ್​ ಕದನ: ಅಭಿಮಾನಿಗಳಿಂದ ವಿಶೇಷ ಪೂಜೆ !

ಘಟನೆಯಲ್ಲಿ ದಿನೇಶ್​ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು. ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES