ಬೆಳಗಾವಿ : ಬಸ್ನಲ್ಲಿ ಕನ್ನಡ ಮಾತಾಡಿ ಎಂದಿದ್ದಕ್ಕೆ ಕನ್ನಡಿಗ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಿ. ನಂತರ ಪೋಕ್ಸೋ ಕೇಸ್ ದಾಖಲಿಸಿದ್ದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರತಿದ್ದು. ಇದೀಗ ಅಪ್ರಾಪ್ತ ಪೋಷಕರು ಪೋಕ್ಸೋ ಕೇಸ್ನ್ನು ವಾಪಾಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸಂತ್ರಸ್ಥೆಯ ತಾಯಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು. ಟಿಕೆಟ್ ವಿಚಾರಕ್ಕೆ ಆರಂಭವಾದ ಜಗಳವನ್ನು ಭಾಷೆಯ ವಿಚಾರಕ್ಕೆ ಪ್ರಚಾರ ಮಾಡುತ್ತಿದ್ದಾರೆ. ನಾವು ಕನ್ನಡಾಭಿಮಾನಿಗಳು. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡ್ತಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಿ ಎಂದು ಸ್ವಇಚ್ಚೆಯಿಂದ ಕೇಸ್ ವಾಪಾಸ್ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.
ಏನಿದು ಘಟನೆ !
ಟಿಕೆಟ್ ಕೊಡುವಾಗ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಘಟನೆ ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮದ ಬಳಿ ನಡೆದಿತ್ತು. ಈ ಕುರಿತು ಸ್ಥಳಕ್ಕೆ ಕನ್ನಡಪರ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದ್ದರು ಹಾಗೂ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.