ಮಂಡ್ಯ : ಬೆಂಗಳೂರು-ಮೈಸೂರು ಎಕ್ಸಪ್ರೆಸ್ ವೇನಲ್ಲಿ ಭೀಕರ ಅಪಘಾತವಾಗಿದ್ದು. ಕಾರಿಗೆ ಐರಾವತ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದ ತೂಬಿನಕೆರೆ ಎಕ್ಸಿಟ್ ಬಳಿಯಲ್ಲಿ ಘಟನೆ ನಡೆದಿದ್ದು. ಎಕ್ಸ್ಪ್ರೆಸ್ ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದ್ದು. ಕಾರನ್ನು ಮತ್ತೆ ಎಕ್ಸ್ಪ್ರೆಸ್ವೇಗೆ ತಿರುಗಿಸಿದ್ದಾನೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ KSRTC ಐರಾವತ ಬಸ್ ಕಾರಿಗೆ ಡಿಕ್ಕಿ ಹೊಡೆದಿದ್ದು. ಅಪಘಾತದ ರಭಸಕ್ಕೆ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು. ದೊಡ್ಡ ಕಲ್ಲಸಂದ್ರದ ಚಂದ್ರಶೇಖರ ರಾಜೇ ಅರಸ್ ಎಂದು ಗುರತಿಸಲಾಗಿದೆ.
ಇದನ್ನೂ ಓದಿ : ಹೆಂಡತಿ ಕೊ*ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪತಿ ಮುಂದೆ, ಪ್ರತ್ಯಕ್ಷವಾದ ಹೆಂಡತಿ..!
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು. ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.