ಬೆಂಗಳೂರು : ಬಿಸಿಲ ಬೇಗೆಯಿಂದ ಬಸವಳಿದಿದ್ದ ನಗರ ವಾಸಿಗಳಿಗೆ ವರುಣ ತಂಪೆರೆದಿದ್ದು. ರಾಜ್ಯದ ಹಲವಡೆ ಮುಂದಿನ ಎರಡು ದಿನ ಗುಡುಗು ಸಹಿತ ಸಾಧರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತವರಣವಿದ್ದು. ಮಧ್ಯಾಹ್ನದ ವೇಳೆಗೆ ಮಳೆ ಶುರುವಾಗಿದೆ. ಮಲ್ಲೇಶ್ವರ, ಸ್ಯಾಂಕಿರಸ್ತೆ, ಸದಾಶಿವ ನಗರ ಸೇರಿದಂತೆ ಹಲವೆಡೆ ಮಳೆಯಾಗಿದ್ದು. ಅನಿರೀಕ್ಷಿತವಾಗಿ ಆಗಮಿಸಿರುವ ಮಳೆಯಿಂದಾಗಿ ಬೆಂಗಳೂರು ಪುಲ್ ಕೂಲ್ ಆಗಿದೆ. ಜೊತೆಗೆ ಮುಂದಿನ 2 ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ :ಕಾರಿಗೆ ಐರಾವತ ಬಸ್ ಡಿಕ್ಕಿ; ಭೀಕರ ಅಪಘಾತಕ್ಕೆ ನಾಲ್ವರು ಬಲಿ..!
ಯಲ್ಲೋ ಅಲರ್ಟ್ ಘೋಷಣೆ..!
ರಾಜ್ಯದ ಕೆಲ ಜಿಲ್ಲೆಗಳಿಗೆ ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದು. ಇಂದು(ಏ.03) ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು. ನಾಳೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲುಬುರಗಿ ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 5 ಹಾಗೂ 6ರಂದು ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ