ಮಂಗಳೂರು : ಬಹುನಿರೀಕ್ಷಿತ ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತು ಅಂಗೀಕಾರ ನೀಡಿದೆ. ಇದರ ಬೆನ್ನಲ್ಲೆ ವಕ್ಫ್ ಅಕ್ರಮದ ವರದಿ ನೀಡಿದ್ದ ಅನ್ವರ್ ಮಾಣಿಪ್ಪಾಡಿಯವರಿಗೆ ಇಂಟರ್ನೆಟ್ ಕಾಲ್ ಮೂಲಕ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದು ಬಂದಿದೆ.
ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಯವರು ವಕ್ಪ್ ತಿದ್ದುಪಡಿ ವಿಚಾರದಲ್ಲಿ ವರದಿ ನೀಡಿದ್ದರು. ಇದರ ಬೆನ್ನಲ್ಲೆ ಅವರಿಗೆ ಇಂಟರ್ನೆಟ್ ಕಾಲ್ ಮೂಲಕ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದು ಬಂದಿದೆ. ಕಳೆದ ಎರಡು-ಮೂರು ದಿನಗಳಿಂದ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿದ್ದು. ಉರ್ದು, ಮರಾಠಿ, ಹಿಂದಿ, ತುಳು, ಇಂಗ್ಲೀಷ್ ಭಾಷೆಯಲ್ಲಿ ಬೆದರಿಕೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ವಿನಯ್ ಸಾವಿಗೆ ನ್ಯಾಯಕೊಡಿಸುವಂತೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ; ವಿಜಯೇಂದ್ರ
ಕೆರೆ ಮಾಡಿರುವ ಆಘಂತುಕರು ಅನ್ವರ್ ಮಾಣಿಪ್ಪಾಡಿಯವರಿಗೆ ‘ನಿನ್ನನ್ನು ಬಿಡುವುದಿಲ್ಲ, ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದು. ಈ ವಿಚಾರವನ್ನು ಮಾಣಿಪ್ಪಾಡಿಯವರು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ತಿಳಿಸಿದ್ದು. ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.